ನ್ಯೂಸ್ ನಾಟೌಟ್ : ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನಿನ್ನೂ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾಗಿದ್ದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್ಕುಮಾರ್ ಕಟೀಲ್ ತಿಳಿಸಿದ್ದಾರೆ. ರಾಜೀನಾಮೆ ಪ್ರಹಸನದ ಬೆನ್ನಲ್ಲೇ ಹೇಳಿಕೆಯನ್ನು ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ಬಳ್ಳಾರಿಯಲ್ಲಿ ಮಾತನಾಡಿದ್ದ ನಳಿನ್ ಕುಮಾರ್ ಕಟೀಲ್ , ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ.