ನ್ಯೂಸ್ ನಾಟೌಟ್ : ಕ್ಷುಲ್ಲಕ ವಿಚಾರಕ್ಕಾಗಿ ದಂಪತಿ ಮಧ್ಯೆ ಜಗಳವಾಗಿದೆ, ಗಲಾಟೆ ವಿಪರೀತವಾಗಿ ಹೆಂಡತಿ ಬಾವಿಗೆ ಹಾರಲು ಓಡಿದ್ದಾರೆ, ಈ ಘಟನೆಯಲ್ಲಿ ದಂಪತಿ ದಾರುಣ ಅಂತ್ಯ ಕಂಡಿದ್ದು, ಜೂನ್ 25 ರಂದು ಕಾರ್ಕಳ ತಾಲೂಕು ನಲ್ಲೂರಿನಲ್ಲಿ ಘಟನೆ ನಡೆದಿದೆ.
ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಯಶೋದಾ (32) ಎಂಬವರೇ ಸಾವಿಗೀಡಾದ ದಂಪತಿ ಎಂದು ಗುರುತಿಸಲಾಗಿದೆ.
ರವಿವಾರ ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿಯ ಮಧ್ಯೆ ಜಗಳವಾಗಿದ್ದು, ಈ ವೇಳೆ ಯಶೋದಾ ತೋಟದಲ್ಲಿದ್ದ ಬಾವಿಗೆ ಹಾರಿದ್ದಾರೆ. ಯಶೋದಾರನ್ನು ರಕ್ಷಿಸಲು ತೆರಳಿದ್ದ ಪತಿ ಇಮ್ಯಾನುಲ್ ಕೂಡ ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋದಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸಕ್ಕಿದ್ದರು. ದಂಪತಿ ಸಾವಿನಿಂದ ಇದೀಗ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ.
ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ತೇಜಸ್ವಿ, ಪೊಲೀಸರಾದ ಪ್ರಕಾಶ್, ಸುಭಾಶ್ ಕಾಮತ್, ಸುಂದರ ಗೌಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಗ್ರಾಮ ಪಂಚಾಯತ್ ಸದಸ್ಯರಾದ ಸುಮಿತ್ ನಲ್ಲೂರು ಹಾಗೂ ಲೋಕೇಶ್ ಶೆಟ್ಟಿ, ಸ್ಥಳೀಯರಾದ ಹರಿಪ್ರಸಾದ್ ಬಜಗೋಳಿ, ಶಿವಣ್ಣ ನಲ್ಲೂರು, ನಾರಾಯಣ ಗೌಡ ಅವರು ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತುವಲ್ಲಿ ಸಹಕರಿಸಿದರು. ನಲ್ಲೂರು ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ನಾಗೇಶ್, ಸ್ಥಳೀಯರಾದ ಜಯರಾಮ ಶೆಟ್ಟಿ, ಕೃಷ್ಣ ಶೆಟ್ಟಿ ಮೊದಲಾದವರು ಘಟನಾ ಸ್ಥಳಕ್ಕಾಗಮಿಸಿದ್ದರು ಎಂದು ಮೂಲಗಳು ತಿಳಿಸಿವೆ.
Follow us for more updates:
FB PAGE : https://www.facebook.com/NewsNotOut2023
Insta : https://www.instagram.com/newsnotout/
Tweet : https://twitter.com/News_Not_Out
YouTube : https://www.youtube.com/@newsnotout8209
Koo app: https://www.kooapp.com/profile/NewsNotOut
Website : https://newsnotout.com/