ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಸಂಚಾರಿ ನಿಯಮ ಉಲ್ಲಂಘಿಸುವ ವಾಹನ ಸವಾರರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಇದೀಗ ಅಂತಹ ನಿಯಮ ಉಲ್ಲಂಘನೆ ನಡೆಸುವ ಬೈಕ್ ಸವಾರರ ವಿರುದ್ಧ ಸುಳ್ಯ ಪೊಲೀಸರು ಬಿಗಿ ಕ್ರಮವನ್ನು ತೆಗೆದುಕೊಂಡಿದ್ದಾರೆ.
ಹೆಲ್ಮೆಟ್ ಧರಿಸದೆ ಓಡಾಡಿದವರನ್ನು ಸುಳ್ಯದ ಶ್ರೀರಾಮ್ ಪೇಟೆಯಲ್ಲಿ ಪೊಲೀಸರು ಹಿಡಿದಿದ್ದಾರೆ. ನಿಯಮ ಉಲ್ಲಂಘಿಸಿದವರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಸುಳ್ಯದಲ್ಲಿ ಕಠಿಣ ನಿಯಮ ಜಾರಿಗೆ ಬರಲಿದೆ ಅನ್ನುವ ಮುನ್ಸೂಚನೆಯನ್ನು ಪೊಲೀಸರು ನೀಡಿದ್ದಾರೆ. ಈರಯ್ಯ ದೂಂತೂರು ಅವರು ಎಸ್ಐ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಸುಳ್ಯ ನಗರದಲ್ಲಿ ಒಂದಷ್ಟು ಶಿಸ್ತಿನ ಬದಲಾವಣೆ ಕಂಡು ಬರುತ್ತಿದೆ.