ನ್ಯೂಸ್ ನಾಟೌಟ್ :ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು(PraveenNettaru) ಹತ್ಯೆ ಪ್ರಕರಣದ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು.ಇಲ್ಲದೇ ಹೋದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಕ್ಕೆ ಎನ್ಐಎ(NIA) ಅಧಿಕಾರಿಗಳು ನಿರ್ಧರಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಅನೌನ್ಸ್ ಮಾಡುತ್ತಿದ್ದು, ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.
ಸುಳ್ಯದ (Sullia)ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ.ಜತೆಗೆ ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.
ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ(Bellare) ಸಮೀಪ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು.