ನ್ಯೂಸ್ ನಾಟೌಟ್: ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಇದನ್ನು ನಮ್ಮ ನಡೆ ನುಡಿ, ಆಚಾರದಲ್ಲಿ ಪಾಲಿಸಬೇಕು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅತ್ಯುನ್ನತ ಸಾಧನೆ ಮಾಡಿ ನಾವು ಓದಿದ ಸಂಸ್ಥೆ ಮತ್ತು ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ. ಚಿದಾನಂದ ಹೇಳಿದರು.
ಸುಳ್ಯದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಕಾಲೇಜು ಆಡಿಟೋರಿಯಂನಲ್ಲಿ ಆಯೋಜಿಸಿದ ಪ್ರೆಶರ್ಸ್ ಡೇ ಆರೋಹಣ-23 ಮತ್ತು ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯೆ, ಬುದ್ದಿ ಕಲಿಸಿದ ತಂದೆ – ತಾಯಿಗೆ ಹಾಗೂ ಗುರು-ಹಿರಿಯರಿಗೆ ಗೌರವ ನೀಡುವುದನ್ನು ಯಾವತ್ತು ಮರೆಯಬಾರದು ಎಂದು ಡಾ.ಕೆ.ವಿ. ಚಿದಾನಂದ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ನೀಲಾಂಬಿಕೈ ನಟರಾಜನ್ , ಗೈನೋಕಾಲಜಿ ವಿಭಾಗದ ಮುಖ್ಯಸ್ಥೆ ಡಾ.ಗೀತಾ ದೊಪ್ಪ, ಪ್ರೊಫೆಸರ್ ಡಾ. ರವಿಕಾಂತ್, ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಬಾಲಕೃಷ್ಣ, ಸರ್ಜರಿ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ರಂಜಿತ್, ಅನಾಟಮಿ ವಿಭಾಗದ ಪ್ರೊಫೆಸರ್ ಡಾ. ಶೀಲಾ ಜಿ. ನಾಯಕ್ , ಡಾ.ನಮೃತಾ, ವೈದ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.