ಕರಾವಳಿ

FPO ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಮಹೇಶ್ ರೈ ಮೇನಾಲ ಆಯ್ಕೆ

241
Spread the love

ಬೆಂಗಳೂರು : ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯ ರೈತ ಮೋರ್ಚಾದ ನೇತೃತ್ವದಲ್ಲಿ ರೈತ ಉತ್ಪಾದಕರ ಸಂಸ್ಥೆಗಳ (FPO) ರಚನೆಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರಾಗಿ ಮಹೇಶ್ ರೈ ಮೇನಾಲ ಆಯ್ಕೆ ಮಾಡಲಾಗಿದೆ.

ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಜಗನ್ನಾಥ ಭವನ ಮಲ್ಲೇಶ್ವರಂ ಬೆಂಗಳೂರಿನಲ್ಲಿ ರೈತ ಉತ್ಪಾದಕರ ಸಂಸ್ಥೆ ರಚನೆಯ ಕಾರ್ಯಗಾರದಲ್ಲಿ ಭಾಗವಹಿಸಿದ್ದಕ್ಕೆ ಬಿಜೆಪಿ ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಯವರು ಪ್ರಮಾಣ ಪತ್ರ ನೀಡಿದರು ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮತ್ತು ರೈತ ಉತ್ಪಾದಕರ ಸಂಘ ರಚನೆಯ (FPO)ರಾಜ್ಯ ಸಂಚಾಲಕ ಡಾ.ನವೀನ್ ಮತ್ತು ರಾಜ್ಯ ಪದಾಧಿಕಾರಿಗಳು, ವಿವಿಧ ಜಿಲ್ಲೆಯ ರೈತ ಮೋರ್ಚಾದ ಅಧ್ಯಕ್ಷರು, ಸಂಚಾಲಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

See also  ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ, ಇಲ್ಲಿದೆ ವಿಡಿಯೋ
  Ad Widget   Ad Widget   Ad Widget