ನ್ಯೂಸ್ ನಾಟೌಟ್ : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ (Bus) ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಜಾರಿಯಾದ ಬಳಿಕ ಕೆಲವು ಆರಂಭಿಕ ಹಲವು ಅವಘಡಗಳು ಬಿಟ್ಟರೆ ಉಳಿದಂತೆ ಉತ್ತಮ ಯಶಸ್ವಿ ಕಾಣುತ್ತಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ಶಕ್ತಿ ಯೋಜನೆಗೆ ವಿನೂತನವಾಗಿ ಜೂನ್ 11 ರಂದು ಚಾಲನೆ ನೀಡಿದ್ದರು.
ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್ ಮೌಲ್ಯ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಆದಾಯದಲ್ಲಿ ಸರಾಸರಿ 4.41 ಕೋಟಿ ರೂ. ಹೆಚ್ಚಳವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಯೋಜನೆ ಜಾರಿ ನಂತರ ರಾಜ್ಯದ ನಾಲ್ಕೂ ನಿಗಮಗಳ ಬಸ್ ಗಳಲ್ಲಿ ಪ್ರಯಾಣಿಸುವ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.
ಸಾರಿಗೆ ಸಚಿವ ನೀಡಿದ ಮಾಹಿತಿ ಪ್ರಕಾರ, ಶಕ್ತಿ ಯೋಜನೆಗೂ ಮುನ್ನ ಬಸ್ ಗಳಲ್ಲಿ ನಿತ್ಯ ಸರಾಸರಿ 84.91 ಲಕ್ಷ ಜನರು ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿಯಾದ ಬಳಿಕ ಈಗ ಸರಾಸರಿ 1.09 ಕೋಟಿ ಜನರು ಸಂಚರಿಸುತ್ತಿದ್ದಾರೆ. ಇದಲ್ಲದೇ ಸಾರಿಗೆ ನಿಗಮದ ಅದಾಯದಲ್ಲೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಯೋಜನೆ ಜಾರಿಗೂ ಮುನ್ನ ಪ್ರತಿದಿನ ಸರಾಸರಿ ರೂ.24.48 ಕೋಟಿಯಾಗಿತ್ತು. ಶಕ್ತಿ ಯೋಜನೆ ಜಾರಿಯಾದ ಬಳಿಕ ಟಿಕೆಟ್ ಮೌಲ್ಯವೂ ಸೇರಿದಂತೆ ನಿತ್ಯ ಸರಾಸರಿ ರೂ.28.89 ಕೋಟಿ ಬರುತ್ತಿದೆ. ಇನ್ನು ಒಟ್ಟಾರೆ ರೂ.4.41 ಕೋಟಿ ಆದಾಯ ಹೆಚ್ಚಳವಾಗಿದೆ. ಅಲ್ಲದೆ ಪ್ರಸ್ತುತ ಮಹಿಳಾ ಪ್ರಯಾಣಿಕರನ್ನು ಹೊರತುಪಡಿಸಿ ಇತರ ಪ್ರಯಾಣಿಕರ ಸರಾಸರಿ ಆದಾಯ ರೂ.16.87 ಕೋಟಿ ಬರುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.