ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಐದು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೆ ಟ್ರ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.
ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ದ.ಕ.ದಲ್ಲಿ ತಹಶೀಲ್ದಾರ್ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ
ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶಿಲ್ದಾರ್ ಗಳು ರಜೆ ಘೋಷಿಸಲು ಸೂಚಿಸಲಾಗಿದೆ.ದ.ಕ ಜಿಲ್ಲೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.