ನ್ಯೂಸ್ ನಾಟೌಟ್: ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮೊದಲ ಬಲಿಯಾಗಿದೆ.
ಮಂಗಳೂರು ಹೊರ ವಲಯದ ಪಿಲಾರು ಎಂಬಲ್ಲಿ ಮನೆ ಸಮೀಪದ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ(52) ಎಂಬವರು ಮೃತಪಟ್ಟಿದ್ದಾರೆ. ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ನೀರಿಗೆ ಬಿದ್ದು ಉಸಿರು ಗಟ್ಟಿ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.