27.7 C
Sullia
Sunday, March 8, 2026

ಕುಡಿದು ವಾಹನ ಚಲಾಯಿಸಿದ ಖ್ಯಾತ ನಟ, ಕಾರುಗಳಿಗೆ ಸರಣಿ ಅಪಘಾತ; FIR ದಾಖಲು

ನ್ಯೂಸ್ ನಾಟೌಟ್ : ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ ಮಾಡಿದ ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಓಲ್ಡ್ ಏರ್ಪೋರ್ಟ್ ರಸ್ತೆಯ ಕಮಾಂಡೊ ಆಸ್ಪತ್ರೆ ಸಿಗ್ನಲ್ ಬಳಿ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆಯಲಾಗಿದೆ. ಈ ವೇಳೆ ಒಂದಕ್ಕೊಂದು ಕಾರುಗಳ ನಡುವೆ ಸರಣಿ ಅಪಘಾತವಾಗಿದೆ.

ಪಾರ್ಚೂನರ್ ಕಾರಿನಲ್ಲಿ ಮಯೂರ್ ಪಟೇಲ್ ಬರುತ್ತಿದ್ದರು. ತಾನೇ ಕಾರು ಚಲಾಯಿಸುತ್ತಿದ್ದರು. ವೇಗ ಮತ್ತು ಅಜಾಗರೂಕ ಚಾಲನೆಯಿಂದ ಅಪಘಾತವಾಗಿದೆ. ಘಟನೆಯಲ್ಲಿ ನಾಲ್ಕು ಕಾರುಗಳು ಜಖಂಗೊಂಡಿವೆ.

ಎರಡು ಸ್ವಿಫ್ಟ್ ಡಿಜೈರ್ ಕಾರು, ಮತ್ತೊಂದು ಸರ್ಕಾರಿ ಕಾರು ಜಖಂಗೊಂಡಿವೆ. ಡ್ರಂಕ್ & ಡ್ರೈವ್ ಮಾಡಿ ಅಪಘಾತ ಎಸಗಿದ ಆರೋಪ ಕೇಳಿಬಂದಿದೆ. ಘಟನಾ ಸ್ಥಳಕ್ಕೆ ಹಲಸೂರು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles