ನ್ಯೂಸ್ ನಾಟೌಟ್: ವಿಧಾನಸಭೆ ವಿರೋಧ ಪಕ್ಷ ನಾಯಕನ ಸ್ಥಾನದ ರೇಸ್ನಲ್ಲಿ ನಾನು ಇಲ್ಲ. ಆದರೆ, ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನ ನೀಡಿ ಎಂದು ಪಕ್ಷದ ವರಿಷ್ಠರ ಮುಂದೆ ಮನವಿ ಮಾಡಿದ್ದೇನೆ’ ಎಂದು ಮಾಜಿ ಸಚಿವ ಆರ್. ಅಶೋಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ವಿಪಕ್ಷ ನಾಯಕನ ಆಯ್ಕೆ ಬಗ್ಗೆ ನಿನ್ನೆ ಕೇಂದ್ರ ನಾಯಕರು ನಮ್ಮ ಮಾಹಿತಿ ಪಡೆದು ಹೊಸದಿಲ್ಲಿಗೆ ತೆರಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಬಳಿ ಚರ್ಚಿಸಿ ಸಂಜೆ ವೇಳೆಗೆ ಪ್ರತಿಪಕ್ಷ ನಾಯಕರು ಯಾರು ಎಂದು ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ಆದರೆ, ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಯಾವುದೇ ಬದಲಾವಣೆಗಳಿಲ್ಲ ಎಂದು ತಿಳಿಸಿದ್ದಾರೆ.
ನನಗೂ ಒಂದು ಅವಕಾಶ ಮಾಡಿಕೊಡಿ. ನೂರು ದಿನಗಳ ಕಾಲ ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಸಾಕು ಎಂದು ಮಾಜಿ ಸಚಿವ ವಿ.ಸೋಮಣ್ಣ (V.Somanna) ಬಿಜೆಪಿ ಹೈಕಮಾಂಡ್ಗೆ (BJP High Command) ಮನವಿ ಮಾಡಿದ್ದರು ಎಂಬ ಸುದ್ದಿ ಈ ಹಿಂದೆ ಹರಿದಾಡಿತ್ತು.
ನಗರದಲ್ಲಿ ಮಾತನಾಡಿದ ಅವರು, ಎರಡು ಬಾರಿ ನಾನು ದೆಹಲಿಗೆ ಹೋಗಿ ಬಂದಿದ್ದೇನೆ. ವರಿಷ್ಠರ ಭೇಟಿ ಮಾಡಿ ಕೆಲ ಸಂಗತಿಗಳ ಬಗ್ಗೆ ಹೇಳಿ ಬಂದಿದ್ದೇನೆ. ನಾನು 45 ವರ್ಷ ರಾಜಕಾರಣ ಅನುಭವದ ಆಧಾರದ ಮೇಲೆ ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಕೇಳಿದ್ದೇನೆ. ಪತ್ರವನ್ನು ಕೂಡ ನಾನು ಬರೆದಿದ್ದೇನೆ. ಪಕ್ಷ ಕೊಟ್ಟ ಎಲ್ಲ ಟಾಸ್ಕ್ಗಳನ್ನು ಸ್ವೀಕಾರ ಮಾಡಿ ಅತ್ಯಂತ ಶ್ರಮಪಟ್ಟು ಎಲ್ಲವನ್ನೂ ನಿರ್ವಹಣೆ ಮಾಡಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದ್ದರು.