ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆದಿದ್ದು ಶಾಲಾ ಮಾಲಕಿ ಜ್ಯೋತಿ ಎಂಬಾಕೆಯನ್ನು ಲೋಕಾಯುಕ್ತ ವಶಕ್ಕೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಬಜ್ಪೆ ಬಳಿ ಇರುವ ನಿರಂಜನ ಸ್ವಾಮೀಜಿ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಕೆಲಸ ನಿರ್ವಹಿಸಿದ್ದ ಶಾಲಾ ಶಿಕ್ಷಕಿಯ ನಿವೃತ್ತಿ ಪೆನ್ಶನ್ ದಾಖಲೆ ಕೊಡಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಸೈಮನ್, ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ. ಶಾಲಾ ಮಾಲಕಿ ಜ್ಯೋತಿ ಲೋಕಾಯುಕ್ತ ವಶಕ್ಕೆ ಪಡೆದುಕೊಳ್ಳಲಾಗಿದೆ.