27.7 C
Sullia
Sunday, March 8, 2026

ಮಕ್ಕಳಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ: 16 ವರ್ಷದೊಳಗಿನವರಿಗೆ social media ಬಳಕೆ ನಿಷೇಧಕ್ಕೆ ಚಿಂತನೆ..!

ನ್ಯೂಸ್ ನಾಟೌಟ್ : ಬೆಂಗಳೂರು: 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಆಸ್ಟ್ರೇಲಿಯಾ ಹಾಗೂ ಗೋವಾದಲ್ಲಿ ಈಗಾಗಲೇ ಈ ನಿಯಮವನ್ನು ಜಾರಿಗೆ ತರಲಾಗಿದ್ದು, ಇದೇ ಮಾದರಿಯನ್ನು ಅನುಸರಿಸಿ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಶುಕ್ರವಾರ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ–ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಾಮಾಜಿಕ ಜಾಲತಾಣಗಳ ದುರುಪಯೋಗ ಗಂಭೀರ ಸಮಸ್ಯೆಯಾಗಿದೆ ಎಂದು ಹೇಳಿದೆ.

ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲತಾಣಗಳ ದುರ್ಬಳಕೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಸಚಿವರು ಈ ಮಾಹಿತಿ ನೀಡಿದರು.

ಫಿನ್‌ಲ್ಯಾಂಡ್‌ನಲ್ಲಿ ಈ ಸಂಬಂಧ ಕ್ರಮ ಕೈಗೊಳ್ಳಲಾಗಿದೆ. ಬ್ರಿಟನ್ ನಲ್ಲೂ ಇಂತಹ ನಿರ್ಧಾರ ಕುರಿತು ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಿದೆ. ಕರ್ನಾಟಕದಲ್ಲಿಯೂ ನಾವು ಜವಾಬ್ದಾರಿಯುತ ಎಐ ಮತ್ತು ಸಾಮಾಜಿಕ ಜಾಲತಾಣ ಬಳಕೆಗೆ ಡಿಜಿಟಲ್ ಡಿಟಾಕ್ಸಿಫಿಕೇಶನ್ ಕಾರ್ಯಕ್ರಮ ಆರಂಭಿಸಿದ್ದೇವೆ ಎಂದು ಹೇಳಿದರು.

Related Articles

LEAVE A REPLY

Please enter your comment!
Please enter your name here

Latest Articles