27.7 C
Sullia
Sunday, March 8, 2026

ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ

ನ್ಯೂಸ್ ನಾಟೌಟ್ : ರಾಜ್ಯಸಭಾ ಸದಸ್ಯೆ ಸುನೇತ್ರಾ ಪವಾರ್ ಅವರು ತಮ್ಮ ಪತಿ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಮರಣದ ಮೂರು ದಿನಗಳ ನಂತರ ಶನಿವಾರ ( ಇಂದು) ಮಹಾರಾಷ್ಟ್ರದ ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಸರ್ವಾನುಮತದಿಂದ ಆಯ್ಕೆಯಾದರು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಬಳಿಕ ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲರು ಪ್ರತಿಜ್ಞಾವಿಧಿ ಭೋಧಿಸಿದರು. ಸಿಎಂ ದೇವೇಂದ್ರ ಫಡ್ನವೀಸ್ ಹಾಗೂ ಡಿಸಿಎಂ ಏಕನಾಥ್ ಶಿಂಧೆ ಹಾಗೂ ಎನ್‌ಸಿಪಿ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಸುನೇತ್ರಾ ಪವಾರ್ ಅವರ ಹೆಸರನ್ನು ಹಿರಿಯ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಪ್ರಸ್ತಾಪಿಸಿದರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಅನುಮೋದಿಸಿದರು.


ದಕ್ಷಿಣ ಮುಂಬೈನ ವಿಧಾನ ಭವನದ ಸಂಕೀರ್ಣದ ನೆಲ ಮಹಡಿಯಲ್ಲಿರುವ ದಿವಂಗತ ಅಜಿತ್ ಪವಾರ್ ಅವರ ಕಚೇರಿಯಲ್ಲಿ ನಡೆದ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಯಿತು.


ಇನ್ನೂ ಮುಂದೆ ಬಾರಮತಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಲ್ಲಿ ಸುನೇತ್ರಾ ಪವಾರ್ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿ ಬರಬೇಕಾಗಿದೆ. ಸುನೇತ್ರಾ  ಪವಾರ್ ರಾಜ್ಯಸಭೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವರು. ಆ ಸ್ಥಾನಕ್ಕೆ ಪುತ್ರ ಪಾರ್ಥ ಪವಾರ್ ಆಯ್ಕೆಯಾಗುವರು.

Related Articles

LEAVE A REPLY

Please enter your comment!
Please enter your name here

Latest Articles