ನ್ಯೂಸ್ ನಾಟೌಟ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಪಿಎಸ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ನಗರದ ಟೌನ್ ಹಾಲ್ ಮುಂದೆ ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಾರಿ ಮಾಡಿದ್ದ ಸಮನ್ಸ್ಗೆ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಕುರಿತಂತೆ ತಮ್ಮ ವಿರುದ್ಧ ಎಸ್ ಜೆ ಪಾರ್ಕ್ ಠಾಣಾ ಇನ್ಸ್ಪೆಕ್ಟರ್ ಬೆಂಗಳೂರು ನಗರದ ೬ನೇ ಎಸಿಎಂಸಿ ನ್ಯಾಯಾಲಯದಲ್ಲಿ ಧಾಕಲಿಸಿರುವ ಖಾಸಗಿ ದೂರು ಮತ್ತು ನ್ಯಾಯಾಲಯ ಹೊರಡಿಸಿರುವ ಸಮನ್ಸ್ ರದ್ದು ಪಡಿಸುವಂತೆ ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಂ. ನಾಗ ಪ್ರಸನ್ನ ಅವರ ಪೀಠ ಮಧ್ಯಂತರ ಆದೇಶ ಮಾಡಿದೆ.
ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ 2022 ಜು.28ರಂದು ಜೆ.ಸಿ ರಸ್ತೆಯಲ್ಲಿರುವ ಟೌನ್ ಹಾಲ್ ಮುಂಭಾಗ ಚಕ್ರವರ್ತಿ ಸೂಲಿಬೆಲೆ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ವೇಳೆ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಂ.ಆರ್ . ಸತೀಶ್ ಅವರು ಚಕ್ರವರ್ತಿ ಸೂಲಿಬೆಲೆ ಸೇರಿದಂತೆ ಒಟ್ಟು 11 ಮಂದಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.