ನ್ಯೂಸ್ ನಾಟೌಟ್: ಎರಡು ದಿನಗಳಿಂದ ಕೊಂಚ ಕಡಿಮೆಯಾದಂತೆ ಗೋಚರಿಸುತ್ತಿರುವ ಮಳೆ ಮತ್ತೆ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಹವಾಮಾನ ಇಲಾಖೆ, ಮುಂದಿನ ಮೂರು ಗಂಟೆಗಳಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾವೇರಿ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಸದ್ಯ ಉತ್ತರ ಭಾರತದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಲದವರು ಯಾರಾದರೂ ಈ ಭಾಗಕ್ಕೆ ಹೋಗಿ ಸಿಲುಕಿಕೊಂಡಿದ್ದಲ್ಲಿ ಅಂತಹವರ ಮಾಹಿತಿಯನ್ನು ಟೋಲ್ ಫ್ರೀ ನಂಬರ್ 1077 ಗೆ ಕರೆ ಮಾಡಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.