ನ್ಯೂಸ್ ನಾಟೌಟ್: ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಇಲ್ಲಿನ ಮಿಯ್ಯಾರು ಎಂಬಲ್ಲಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕುರಿತು ತಿಳಿಸಿದೆ.
ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್ ಸಿ ಪ್ರಶಾಂತ್ ಎಂಬವರು ಕಾರ್ಕಳದ ಮಿಯ್ಯಾರಿನ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು,ಪ್ರಶಾಂತ್ ರಜೆಯಲ್ಲಿದ್ದರು ಎನ್ನ;ಲಾಗಿದೆ. ಮನೆಯ ಹಿಂಬಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮಾಹಿತಿ ದೊರೆತಿದೆ. ಆತ್ಮಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.