ನ್ಯೂಸ್ ನಾಟೌಟ್ : ನೀವು ದೇವಸ್ಥಾನದಲ್ಲಿ ಮೊಬೈಲ್ ಬಳಕೆ ಮಾಡುತ್ತೀರಾ? ವಿಡಿಯೋ ,ಸೆಲ್ಫಿ ತೆಗಿತೀರಾ? ಇನ್ಮುಂದೆ ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ತಮಿಳುನಾಡಿನಾದ್ಯಂತ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧ ಮಾಡಲಾಗಿತ್ತು.ಇದೀಗ ಕರ್ನಾಟಕದ ದೇವಸ್ಥಾನಗಳಲ್ಲಿಯೂ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ.ಮೊಬೈಲ್ ಫೋನ್ ಬಳಕೆ ಬಗ್ಗೆ ಹಾಗೂ ನಿಷೇಧದ ಬಗ್ಗೆಯೂ ಮೊದಲಿನಿಂದಲೂ ಚರ್ಚೆ ನಡೆದಿದ್ದು ಇದೀಗ ಅಧಿಕೃತವಾಗಿ ಮೊಬೈಲ್ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ.
ಕೆಲವು ದೇವಾಲಯಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದೆ. ಸಾವಿರಾರು ಭಕ್ತರು ಆಗಮಿಸಿ ದೇವರ ಮೊರೆ ಹೋಗುತ್ತಾರೆ.ಇನ್ನು ಕೆಲವು ದೇಗುಲಗಳಲ್ಲಿ ಭಕ್ತರ ಸಂಖ್ಯೆ ಕಡಿಮೆ ಇದ್ದರೂ ಮೊಬೈಲ್ ಫೋನ್ ರಿಂಗಣಿಸಿದಾಗ ದೇವರ ದರ್ಶನಕ್ಕೆ ಬರುವ ಇತರ ಭಕ್ತರಿಗೂ ತೊಂದರೆಯನ್ನುಂಟು ಮಾಡುತ್ತದೆ.ಮಾತ್ರವಲ್ಲ ಮೊಬೈಲ್ ಫೋನ್ ಬಳಕೆಯ ಶಬ್ಧಗಳಿಂದ ಸಿಬ್ಬಂದಿಗಳಿಗೂ ಅಡಚಣೆಯಾಗೋದ್ರಿಂದ ಮೊಬೈಲ್ ಬಳಕೆ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.