ನ್ಯೂಸ್ ನಾಟೌಟ್ : ತಾಯಿಯೊಬ್ಬಳು ತನ್ನಿಬ್ಬರು ಹೆಣ್ಣು ಮಕ್ಕಳ ಜತೆ ಬಾವಿಗೆ ಹಾರಿದ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ನಡೆದಿದೆ. ಅದೃಷ್ಟವಶಾತ್ ಓರ್ವ 7 ವರ್ಷ ಪ್ರಾಯದ ಹೆಣ್ಣು ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ತಾಯಿ ನಾಗಮ್ಮ (38) ಹಾಗೂ ಮಗಳು ಶ್ರೀನಿಧಿ (5) ದುರಂತ ಅಂತ್ಯ ಕಂಡವರು.ಗಂಗೋತ್ರಿ(7) ಬಾವಿಯಿಂದ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾಳೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳಿಗಾಗಿ ಆಗ್ನಿಶಾಮಕದಳ ಶೋಧ ಕಾರ್ಯ ನಡೆಸಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.