ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯ ಮೇಲೆ ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಳಪೆ ನಿವಾಸಿ ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ (32) ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್ ಪೋನ್ ವಶಕ್ಕೆ ಪಡೆದಿದ್ದಾರೆ.
ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ 4 ಮಂದಿ ವಿದ್ಯಾರ್ಥಿನಿಯರು ಬೀಚ್ ಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳನ್ನು ಬೈಕ್ ನಲ್ಲಿ ಹಿಂಬಾಲಿಸಿ ಬಂದು ತಂಡವೊಂದು ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದೆ ಎಂದು ದೂರು ದಾಖಲಾಗಿತ್ತು. ಗಾಯಗೊಂಡ ವಿದ್ಯಾರ್ಥಿ ಉರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.