ನ್ಯೂಸ್ ನಾಟೌಟ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದಿದೆ.
ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಈ ಘಟನೆಯಿಂದ ದಿಡುಪೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕೂಡಲೇ ಚಿರತೆಯನ್ನು ಹಿಡಿಯಬೇಕು ಅನ್ನುವ ಒತ್ತಾಯ ಕೇಳಿ ಬಂದಿದೆ.













