21.6 C
Sullia
Sunday, March 8, 2026

ಕೊಡಗು: SDPI ರಾಜ್ಯಾಧ್ಯಕ್ಷ ಮಜೀದ್ ಕಾರಿನಲ್ಲಿ ಏಕಾಏಕಿ ಬೆಂಕಿ

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಇಂದು ಭಾನುವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಎಚ್ಚರಿಕೆಯಿಂದ ಕಾರಿನಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಕುಶಾಲನಗರ ಅಗ್ನಿಶಾಮಕ ದಳ, ಸ್ಥಳಕ್ಕೆ ಆಗಮಿಸಿ ತಕ್ಷಣವೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿಗೆ ಹೆಚ್ಚಿನ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದಿಲ್ಲ.

Related Articles

LEAVE A REPLY

Please enter your comment!
Please enter your name here

Latest Articles