ನ್ಯೂಸ್ ನಾಟೌಟ್: ಕಳೆದೆರಡು ದಿನಗಳಿಂದ ಕರಾವಳಿ ಸೇರಿದಂತೆ ಪಶ್ಚಿಮಘಟ್ಟ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ. ಸೋಮವಾರ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿ ರಸ್ತೆಗೆ ಗುಡ್ಡ ಕುಸಿದು ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದೆ.
ಮಳೆಯ ಅಬ್ಬರಕ್ಕೆ ಚಾರ್ಮಾಡಿ ಘಾಟಿ ರಸ್ತೆಯ ಆಲೆಕಾನ್ ಮತ್ತು ಬಿದ್ರುತಳ ಮಧ್ಯದಲ್ಲಿ ರಸ್ತೆಗೆ ಮಣ್ಣು ಕುಸಿದಿದೆ. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯ ಚಾರ್ಮಾಡಿ ಘಾಟಿಯ ಹಲವು ಭಾಗಗಳಲ್ಲಿಮತ್ತೆ ಕುಸಿಯುವ ಭೀತಿ ಎದುರಾಗಿದೆ.