ನ್ಯೂಸ್ ನಾಟೌಟ್: ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಮತ್ತು ನಿಡ್ಪಳ್ಳಿ ಗ್ರಾಪಂ ವಾರ್ಡ್ಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಮುಗಿದಿದ್ದು ಫಲಿತಾಂಶ ಪ್ರಕಟವಾಗಿದೆ. ಆರ್ಯಾಪು ಕ್ಷೇತ್ರದಲ್ಲಿ ಪುತ್ತಿಲ ಪರಿವಾರದಿಂದ ಕಣಕ್ಕಿಳಿದಿದ್ದ ಸುಬ್ರಹ್ಮಣ್ಯ ಬಲ್ಯಾಯ ಜಯಗಳಿಸಿದ್ದಾರೆ.
ನಿಡ್ಪಳ್ಳಿ ವಾರ್ಡ್ನಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸತೀಶ್ ರೈ ನೆಲ್ಲಿಕಟ್ಟೆ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಹತ್ತಿರದ ಪ್ರತಿ ಸ್ಪರ್ಧಿ ಪುತ್ತಿಲ ಪರಿವಾರದ ಜಗನ್ನಾಥ ರೈ ಕೊಳೆಂಬೆತ್ತಿಮಾರ್ ಅವರನ್ನು 27 ಮತಗಳ ಅಲ್ಪ ಮತಗಳ ಅಂತರದಿಂದ ಸೋಲಿಸಿದ್ದಾರೆ. ಹೀಗಾಗಿ ಫಲಿತಾಂಶ ದೃಢೀಕರಿಸಲು ಮರುಎಣಿಕೆ ನಡೆಸಲಾಯಿತು. ಕಳೆದ ಬಾರಿ ಸತೀಶ್ ರೈಯವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಮುರಳಿ ಕೃಷ್ಣ ಅವರ ಎದುರು 24 ಮತಗಳಿಂದ ಸೋತಿದ್ದರು.
ನಿಡ್ಪಳ್ಳಿ ಕ್ಷೇತ್ರದ ಮತವಿವರ: ಸತೀಶ್ ರೈ 235, ಜಗನ್ನಾಥ ರೈ 208, ಬಿಜಿಪಿ ಬೆಂಬಲಿತ 85
ಬಿಜೆಪಿ ಬೆಂಬಲಿತ ಅಭ್ಯರ್ಥಿ ರುಕ್ಮಾ ನಾಯ್ಕ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಗದೀಶ ಭಂಡಾರಿ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ಎರಡು ಕ್ಷೇತ್ರಗಳು ಬಿಜೆಪಿ ಬೆಂಬಲಿತ ಗ್ರಾ. ಪಂ ಸದಸ್ಯರ ಆಕಾಲಿಕ ನಿಧನದಿಂದ ತೆರವಾಗಿತ್ತು. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿರುವುದು. ಪಕ್ಷಕ್ಕೆ ತನ್ನ ಭದ್ರ ಕೋಟೆಯಲ್ಲಿ ತೀವ್ರ ಹಿನ್ನಡೆಯಾದಂತಾಗಿದೆ.