ನ್ಯೂಸ್ ನಾಟೌಟ್: ಬೆಳ್ತಂಗಡಿಯಲ್ಲಿ ಬಾಲಕ ಸುಮಂತ್ ಕೊಲೆಯ ನಿಗೂಢ ರಹಸ್ಯ ಇನ್ನೂ ಹೊರ ಬಂದಿಲ್ಲ. ಈ ಬೆನ್ನಲ್ಲೇ ನೆಲ್ಯಾಡಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವೃದ್ದರೊಬ್ಬರು ಸಾವಿಗೀಡಾಗಿದ್ದಾರೆ. ಮೃತರನ್ನು ಕೆ.ಸಿ ವರ್ಗೀಸ್ ಎಂದು ಗುರುತಿಸಲಾಗಿದೆ. ಅವರಿಗೆ 73 ವರ್ಷವಾಗಿತ್ತು.
ಕೆ.ಸಿ ವರ್ಗೀಸ್ ಅವರ ಪತ್ನಿಯನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕುಟುಂಬದ ಸದಸ್ಯರು ಕರೆದುಕೊಂಡು ಹೋಗಿದ್ದರು. ಈ ವೇಳೆ ವರ್ಗೀಸ್ ರವರು ಮನೆಯಲ್ಲಿ ಒಬ್ಬರೇ ಇದ್ದರು. ಮನೆಯವರು ವಾಪಸ್ ಮನೆಗೆ ಬಂದಾಗ ಮನೆಯಲ್ಲಿ ಮಂಚದ ಕೆಳಗೆ ರಕ್ತದ ಮಡುವಿನಲ್ಲಿ ವರ್ಗೀಸ್ ರವರು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು. ಸದ್ಯ ದೂರಿನ ಪ್ರಕಾರವಾಗಿ ಕಡಬ ತಾಲೂಕು ರವರ ದೂರಿನ ಅನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ 07/2026, ಕಲಂ 194 (III)(IV) BNSS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.













