27.7 C
Sullia
Sunday, March 8, 2026

ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್

ನ್ಯೂಸ್ ನಾಟೌಟ್ : ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು ಸುಚಿತ್ರಾ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್ ಮಾಡಿ ಬೆದರಿಕೆ ಹಾಕಿದ್ದಾಳೆ ಎಂದು ಸುಚಿತ್ರಾ ಪತಿ ಮಹೇಶ್ ನಾಯ್ಕ ಗಂಭೀರ ಆರೋಪ ಮಾಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಆರೋಪಿ ಸುಚಿತ್ರಾ, ಜ್ಯೋತಿಷಿ ಕಮಲಾಕರ ಭಟ್‌ಗೆ ಹನಿಟ್ರ್ಯಾಪ್ (Honey Trap) ಮಾಡಿ ಖಾಸಗಿ ಕ್ಷಣಗಳ ವಿಡಿಯೋಗಳನ್ನು ಮಾಡಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು ಎಂದು ಮಹೇಶ್ ನಾಯ್ಕ ಹೇಳಿದ್ದಾರೆ. 

ಕಮಲಾಕರ್ ಸಂಪರ್ಕಕ್ಕೆ ಬಂದ ಬಳಿಕ ಸುಚಿತ್ರಾ ಖಾಸಗಿ ಕ್ಷಣಗಳ ವಿಡಿಯೋ ಮಾಡಿಟ್ಟುಕೊಂಡಿದ್ದಳು. ಮಕ್ಕಳ ಜತೆ ನಾನು ನಿನ್ನ ಜತೆ ಬರುತ್ತೇನೆ. ನನ್ನನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ ಮರ್ಯಾದೆ ತೆಗೆಯುತ್ತೇನೆ ಎಂದು ಹೆದರಿಸುತ್ತಿದ್ದಳು. ಹೀಗಾಗಿ ಮರ್ಯಾದೆಗೆ ಅಂಜಿ ಕಮಲಾಕರ್ ಭಟ್‌ ಆಕೆಯನ್ನು ತನ್ನೊಂದಿಗೆ ಇರಿಸಿಕೊಂಡಿದ್ದ ಎಂದು ತಿಳಿಸಿದರು.

ಈ ವಿಚಾರವನ್ನು ನನ್ನ ಮಗಳು ಈಗ ತಿಳಿಸಿದ್ದಾಳೆ. ಮೊದಲು ಭಯದಿಂದ ಮಗಳು ಈ ವಿಚಾರವನ್ನು ತಿಳಿಸಿರಲಿಲ್ಲ. ಆದರೆ ಈಗ ಸುಚಿತ್ರಾ ಬ್ಲ್ಯಾಕ್‌ಮೇಲ್‌ ಮಾಡಿರುವ ಬಗ್ಗೆ ತನ್ನ ಜೊತೆ ಹೇಳಿದ್ದಾಳೆ ಎಂದು ಮಹೇಶ್ ನಾಯ್ಕ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles