ನ್ಯೂಸ್ ನಾಟೌಟ್ : ಉಡುಪಿಯ ಕಾಲೇಜೊಂದರ ಟಾಯ್ಲೆಟ್ನಲ್ಲಿ 3 ಮುಸ್ಲಿಂ ಯುವತಿಯರು ಹಿಂದೂ ಯುವತಿಯರ ವಿಡಿಯೋ ಮಾಡಿದ ಆರೋಪ ಇತ್ತೀಚೆಗೆ ಕೇಳಿಬಂದಿದ್ದು ರಾಜ್ಯದಾದ್ಯಂತ ಸುದ್ದಿಯಾಗಿದೆ.
ಅದರ ಸುತ್ತ ನಾನಾ ಬಗೆಯ ವಿವಾದಗಳು ಹುಟ್ಟಿಕೊಳ್ಳುತ್ತಿದ್ದು, ಇದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕೆಂದು ಒತ್ತಾಯಗಳು ಕೇಳಿ ಬಂದಿವೆ.ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು ಸಿ.ಎಂ. ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ವೊಂದನ್ನು ಹಾಕಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ ನವರ ಪ್ರಕಾರ ಮಕ್ಕಳಾಟವಂತೆ..ಸಿದ್ದರಾಮಯ್ಯನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಟ್ವೀಟ್ ಮಾಡಿದ್ದರು.
ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಇಂದು ಶಕುಂತಲಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.