ನ್ಯೂಸ್ ನಾಟೌಟ್: ನಿಷೇಧಿತ ಮಾದಕ ವಸ್ತು MDMA( Synthetic Drug) ಹೊಂದಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಲಾಗಿದೆ.
ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಎಂಡಿಎಂಎ(Methylene dioxy methamphetamine) ನ್ನು ಕಾರಿನಲ್ಲಿಟ್ಟುಕೊಂಡು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತನನ್ನು ಉಳ್ಳಾಲ ಮಹಮ್ಮದ್ ಆರೀಫ್ (28) ಎಂದು ಗುರುತಿಸಲಾಗಿದೆ.
ಆತನಿಂದ ಒಟ್ಟು 25 ಗ್ರಾಂ ತೂಕದ ರೂ. 1,25,000/- ಮೌಲ್ಯದ ಎಂಡಿಎಂಎ ಮಾದಕ ವಸ್ತು ಹಾಗೂ KA-19-MH-3023 ಮಾರುತಿ ಅಲ್ಟೋ 800 ಕಾರು, ಮೊಬೈಲ್ ಫೋನ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,35,500/-ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ. ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಈತನ ಮೇಲೆ ದಾಖಲಾಗಿರುತ್ತದೆ.
ಈ ಆರೋಪಿಯ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.