ನ್ಯೂಸ್ ನಾಟೌಟ್: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಬೆಳಾಲಿನಲ್ಲಿ ಅದ್ಧೂರಿಯಾಗಿ ಆರಿಕೋಡಿ ಉತ್ಸವ ನಡೆಯಿತು. ಮುಳುಗು ತಜ್ಞ ಈಶ್ವರ್ ಮಲ್ಪೆ ಸೇರಿದಂತೆ ಹಲವಾರು ಮಂದಿ ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶ್ರೀ ಧಾಮ ಮಾಣಿಲದ ಶ್ರೀ ಮೋಹನ್ ದಾಸ ಪರಮಹಂಸ ಸ್ವಾಮೀಜಿ, ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ ಚಿದಾನಂದ, ಶಾಸಕ ಹರೀಶ್ ಪೂಂಜಾ, ಆರಿಕೋಡಿ ಧರ್ಮದರ್ಶಿ ಹರೀಶ್ ಆರಿಕೋಡಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಧಾರ್ಮಿಕ ಸಭಾ ಕಾರ್ಯಕ್ರಮದ ಬಳಿಕ ಖ್ಯಾತ ಗಾಯ ಜಗದೀಶ್ ಆಚಾರ್ಯ ಮತ್ತು ತಂಡದಿಂದ ಭಕ್ತಿಗಾನ ಸಂಭ್ರಮ ನಡೆಯಿತು. ಕುಣಿತ ಭಜನಾ ಕಮ್ಮಟೋತ್ಸವ ಕಾರ್ಯಕ್ರಮದ ಆಕರ್ಷಣೆಯಾಗಿತ್ತು.













