ನ್ಯೂಸ್ ನಾಟೌಟ್: ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೋಳಿ ಹಾಗೂ ಬಾಳು ಹಿಡಿಕೊಂಡೇ ಆರೋಪಿಗಳು ಪರಾರಿಯಾಗಿರುವ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ನಡೆದಿದೆ.
ಉಮೇಶ್ ಗೌಡ ಬಂಟ್ರ ಗ್ರಾಮ ಮತ್ತು ವಿನಯ ಸಿ ಐತ್ತೂರು ಗ್ರಾಮ ಹಾಗೂ ಇತರರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87, 93 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಕಲಂ 3, 11ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.













