ನ್ಯೂಸ್ ನಾಟೌಟ್ : ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಅನಿಲ್ ಬಿ.ವಿ. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
“Fusion of Face – Voice Biometrics for Rough-Neuro-Fuzzy Models” ಎಂಬ ವಿಷಯದ ಕುರಿತು ಇವರು ಮಂಡಿಸಿದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ನೀಡಿದೆ. ಪ್ರೊಫೆಸರ್ ಅನಿಲ್ ಬಿ.ವಿ ಅವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಣೆಗೊಂಡಿದೆ. ಇವರು ವಕೀಲ ವೆಂಕಪ್ಪ ಗೌಡ ಬಾಬ್ಲುಬೆಟ್ಟು ಮತ್ತು ಮೀನಾಕ್ಷಿ ದಂಪತಿಯ ಪುತ್ರ. 23 ವರ್ಷಗಳಿಂದ ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನು ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಸಿಇಒ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ. ಮತ್ತು ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಅಭಿನಂದನೆ ಸಲ್ಲಿಸಿದ್ದಾರೆ.