21.6 C
Sullia
Saturday, March 7, 2026

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ

ನ್ಯೂಸ್ ನಾಟೌಟ್ : ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ‘ರಿಂಗ್ ಆಫ್ ಫೈರ್’ ದೃಶ್ಯ ಜಗತ್ತಿನ ಹಲವೆಡೆ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಭಾರತದಲ್ಲಿ ಈ ಗ್ರಹಣ ಗೋಚರಿಸದ ಕಾರಣ ಸೂತಕ ಇರುವುದಿಲ್ಲ. ಅಮೆರಿಕದ ನಾಸಾ ಸಂಸ್ಥೆ ಇದರ ನೇರಪ್ರಸಾರ ಮಾಡುವ ಸಾಧ್ಯತೆಯಿದೆ, ಮನೆಯಲ್ಲೇ ಆನ್‌ಲೈನ್ ಮೂಲಕ ವೀಕ್ಷಿಸಬಹುದು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ ಮುಚ್ಚದೆ, ಸೂರ್ಯನ ಅಂಚುಗಳು ಬೆಂಕಿಯ ಉಂಗುರದಂತೆ ಹೊಳೆಯುತ್ತವೆ. ಈ ದೃಶ್ಯವೇ “ರಿಂಗ್ ಆಫ್ ಫೈರ್” ಎಂದು ಕರೆಯಲ್ಪಡುತ್ತದೆ. ಗರಿಷ್ಠ ಹಂತವು ಸುಮಾರು 2 ನಿಮಿಷ 20 ಸೆಕೆಂಡುಗಳ ಕಾಲ ಮುಂದುವರಿದು, ಬಳಿಕ ಗ್ರಹಣ ಕ್ರಮೇಣ ಕ್ಷೀಣಿಸಿ ಅಂತ್ಯಗೊಳ್ಳುತ್ತದೆ.

ಕಂಕಣ ಸೂರ್ಯಗ್ರಹಣವು ಸೂರ್ಯ, ಚಂದ್ರ ಮತ್ತು ಭೂಮಿ ಒಂದೇ ಸರಳ ರೇಖೆಯಲ್ಲಿ ಬಂದಾಗ ಉಂಟಾಗುತ್ತದೆ. ಆದರೆ ಚಂದ್ರನು ಭೂಮಿಯಿಂದ ಸ್ವಲ್ಪ ದೂರದಲ್ಲಿರುವ ಕಾರಣ ಸೂರ್ಯನಿಗಿಂತ ಸಣ್ಣದಾಗಿ ಕಾಣುತ್ತದೆ. ಈ ಕಾರಣದಿಂದ ಸೂರ್ಯನನ್ನು ಸಂಪೂರ್ಣ ಮುಚ್ಚಲು ಸಾಧ್ಯವಾಗದೆ, ಸೂರ್ಯನ ಸುತ್ತಲೂ ಉಂಗುರದ ಆಕಾರದಲ್ಲಿ ಬೆಳಕು ಕಾಣಿಸುತ್ತದೆ. ಇದೇ ಈ ಗ್ರಹಣದ ವೈಶಿಷ್ಟ್ಯವಾಗಿದ್ದು, ಖಗೋಳಶಾಸ್ತ್ರ ಪ್ರಿಯರಿಗೆ ಅತ್ಯಂತ ಆಕರ್ಷಕ ಕ್ಷಣವಾಗಿರುತ್ತದೆ.

Related Articles

LEAVE A REPLY

Please enter your comment!
Please enter your name here

Latest Articles