ನ್ಯೂಸ್ ನಾಟೌಟ್ :ಇತ್ತೀಚೆಗಷ್ಟೇ ನಟಿ ಪವಿತ್ರಾ ಲೋಕೇಶ್ ಭಾರಿ ವಿವಾದಕ್ಕೆ ಗುರಿಯಾಗಿದ್ದರು.ಅವರು ಮದುವೆಯಾಗುತ್ತಿದ್ದಾರೆ ಅನ್ನುವ ವಿಚಾರ,ಆನಂತರದ ಬೆಳವಣಿಗೆಗೆಗಳಿಗೆ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು.ಇದೀಗ ಕನ್ನಡ ವಿಶ್ವವಿದ್ಯಾಲಯದ ಪಿಎಚ್ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶದಲ್ಲಿ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎನ್ನುವ ವಿಚಾರ ಸದ್ಯಕ್ಕೆ ಸುದ್ದಿಯಾಗಿದೆ.
ಈ ಕುರಿತಾಗಿ ಮಾತನಾಡಿದ ಕನ್ನಡ ವಿವಿ ಕುಲಸಚಿವ ಡಾ.ಸುಬ್ಬಣ್ಣ ರೈ,”ಕನ್ನಡ ವಿವಿಯಲ್ಲಿ ವಿಜ್ಞಾನ ನಿಕಾಯ ಹೊರತಾಗಿ ಭಾಷಾ ನಿಕಾಯ, ಸಮಾಜ ವಿಜ್ಞಾನ ಮತ್ತು ಲಲಿತಾ ಕಲೆ ನಿಕಾಯದ ವಿವಿಧ ವಿಭಾಗಗಳಡಿ ಸಂಶೋಧನೆಗೆ ಅವಕಾಶ ಕಲ್ಪಿಸಲಾಗುತ್ತದೆ. ಮೂರು ನಿಕಾಯಗಳಡಿ ಸಂಶೋಧನೆಗೆ ಆಸಕ್ತಿ ತೋರಿ 981 ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.
ಕನ್ನಡ ವಿವಿ ವ್ಯಾಪ್ತಿಯ ಅಧ್ಯಯನ ವಿಭಾಗ, ಮಾನ್ಯತಾ ಕೇಂದ್ರ, ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಸ್ಥಾನ ಮತ್ತು ಮಾರ್ಗದರ್ಶಕರ ಸಂಖ್ಯೆಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುತ್ತದೆ. ನಟಿ ಪವಿತ್ರಾ ಲೋಕೇಶ್ ಅವರು ಭಾಷಾ ನಿಕಾಯದಡಿ ಬೆಳಗಾವಿ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಪರೀಕ್ಷೆ ಬರೆದಿದ್ದರು. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.
ಪವಿತ್ರಾ ಅವರು ನರೇಶ್ ಅವರೊಂದಿಗೆ ‘ಮತ್ತೆ ಮದುವೆ’ ಎನ್ನುವ ಚಿತ್ರದಲ್ಲಿ ಕಾಣಿಕೊಂಡಿದ್ದರು.ಆ ಬಳಿಕ ಈ ಚಿತ್ರ ಭಾರಿ ಸಂಚಲವನ್ನುಂಟು ಮಾಡಿತ್ತು.ಅದರ ಮಧ್ಯೆ ಬಿಡುವು ಮಾಡಿಕೊಂಡು ಪವಿತ್ರಾ ಅವರು ಈ ಪರೀಕ್ಷೆಗೆ ಸಿದ್ಧತೆ ನಡೆಸಿಕೊಂಡಿದ್ದು,ಇದೀಗ ಕೇವಲ ೨೫೯ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಅವರಲ್ಲಿ ಪವಿತ್ರಾ ಅವರು ಒಬ್ಬರಾಗಿದ್ದಾರೆ ಅನ್ನೋದು ವಿಶೇಷ.