ನ್ಯೂಸ್ ನಾಟೌಟ್ : ‘ಮೂರು-ನಾಲ್ಕು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ಸೆಕೆ ಇದೆ. ಬೇಸಿಗೆ ಆರಂಭದಲ್ಲೇ ಸೆಕೆ ಹೆಚ್ಚಳದ ಮುನ್ಸೂಚನೆ ನೀಡಿದೆ. ‘ಶಾಖ ಅಲೆ ಕಾರಣ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಫೆ.14 ಮತ್ತು 15 ರಂದು ಶಾಖದ ಅಲೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಧ್ಯಾಹ್ನ 12 ರಿಂದ ಸಂಜೆ 4ರವರೆಗೆ ಮನೆಯಿಂದ ಹೊರಗೆ ಓಡಾಡುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸಲಹೆ ಮಾಡಿದ್ದಾರೆ.
ಫೆ.12ರಂದು ಕಾರವಾರದಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ದೇಶದಲ್ಲಿ ಅತಿ ಹೆಚ್ಚು ಉಷ್ಣಾಂಶವಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.













