ನ್ಯೂಸ್ ನಾಟೌಟ್ : ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಇದೀಗ ಮತ್ತೆ ಹಿಂಸಾಚಾರದಿಂದ 3 ಜನ ಸಾವನ್ನಪ್ಪಿದ್ದಾರೆ ಎನ್ನುವ ಭಯಾನಕ ಸಂಗತಿ ಹೊರ ಬಿದ್ದಿದೆ. ಬಿಷ್ಣುಪುರ್ ಜಿಲ್ಲೆಯಲ್ಲಿ ಇಂದು (ಆ.5) ಮುಂಜಾನೆ ನಡೆದ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಮೂವರು ಜನ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಶಂಕಿತ ವ್ಯಕ್ತಿಗಳು ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟಾ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಈ ಬಗ್ಗೆ ತನಿಖೆ ಮುಂದುವರಿದಿದೆ.ಆದರೆ ಘಟನೆಗೆ ಸಂಬಂಧ ಪಟ್ಟ ಹಾಗೆ ಮಾಹಿತಿ ಲಭ್ಯವಾಗಿದೆ.
ಗುಂಡಿನ ದಾಳಿಯಲ್ಲಿ ತಂದೆ ಮತ್ತು ಮಗ ಸೇರಿದಂತೆ ಪಕ್ಕದ ಮನೆಯಲ್ಲಿದ್ದ ಮತ್ತೊಬ್ಬ ವ್ಯಕ್ತಿ ಮೇಲೆಯು ಗುಂಡು ಹಾರಿಸಲಾಗಿದೆ ಎನ್ನುವ ವಿಚಾರ ಮನಕಲಕುವಂತಿದೆ.ಈ ಪ್ರದೇಶದಲ್ಲಿ ಜನ ನಿತ್ಯ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಹೀಗಾಗಿ ನಿರಾಯುಧ ಗ್ರಾಮದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಮನೆಯಲ್ಲಿ ಮಹಿಳೆಯರು, ಮಕ್ಕಳು ಇದ್ದಾರೆ ಎಂದು ರಾತ್ರಿ ವೇಳೆ ಮನೆ ಕಾವಲು ಕಾಯುತ್ತಿದ್ದರು ಎಂದು ಹೇಳಲಾಗಿದೆ.
ಈ ಘಟನೆ ಸಂಬಂಧ ಪಟ್ಟ ಹಾಗೆ ಮಾಹಿತಿ ಕಲೆ ಹಾಕಲಾಗಿದ್ದು,ಸ್ಪೋಟಕ ಸಂಗತಿಗಳು ಬಯಲಾಗಿವೆ. ದಾಳಿಕೋರರು ಕೇಂದ್ರ ಭದ್ರತಾ ಪಡೆಯ ನಿಯಂತ್ರಣದಲ್ಲಿರುವ ಬೆಟ್ಟಗಳು ಮತ್ತು ಕಣಿವೆಗಳ ನಡುವಿನ ಬಫರ್ ವಲಯದಿಂದ ಕದ್ದುಮುಚ್ಚಿ ಬರುತ್ತಿದ್ದಾರೆ ಎಂದು ಸಂಶಯ ವ್ಯಕ್ತವಾಗಿದೆ. ಇದರಿಂದ ಅಲ್ಲಿಯ ಜನರಲ್ಲಿ ಆತಂಕ ಮನೆ ಮಾಡಿದ್ದು, ಈ ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.