1
ನ್ಯೂಸ್ ನಾಟೌಟ್ : ಸೌಜನ್ಯ ಹತ್ಯೆ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ದಿ.ಸೌಜನ್ಯಳ ತಾಯಿ ಕುಸುಮಾವತಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ಇಂದು(ಆಗಸ್ಟ್ ೦೮) ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ನಿಂತಿಕಲ್ಲಿನಿಂದ ವಾಹನ ಜಾಥಾ ಆರಂಭಗೊಂಡಿತು. ಈ ಪ್ರಯುಕ್ತ ಸುಳ್ಯ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ಈ ಮೂಲಕ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಜತೆಗೆ ಸುಳ್ಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಇಂದು ಬೆಳಗ್ಗೆ ನಿಂತಿಕಲ್ಲಿನಿಂದ ಪ್ರತಿಭಟನೆಗೆ ಚಾಲನೆ ನೀಡಲಾಗಿದ್ದು,ಪ್ರಬಲ ಹಿಂದೂ ಮುಖಂಡ ಮಹೇಶ್ ಶೆಟ್ಟಿ ನೇತೃತ್ವದಲ್ಲಿ ವಾಹನ ಜಾಥಾ ಆರಂಭಗೊಂಡಿತು.ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ನೆರೆದಿದ್ದು,ನಿಂತಿಕಲ್ಲಿನಿಂದ ಹೊರಟ ವಾಹನ ಜಾಥಾ ಪೈಚಾರಿಗೆ ತಲುಪಿ ಅಲ್ಲಿಂದ ನಡಿಗೆಯ ಮೂಲಕ ಸುಳ್ಯಕ್ಕೆ ಆಗಮಿಸಲಿದೆ.
ಸಜನ್ಯಾಳಿಗೆ ಈ ಬಾರಿ ನ್ಯಾಯ ಸಿಗಲೇ ಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು ಜಸ್ಟೀಸ್ ಫಾರ್ ಸೌಜನ್ಯ ಎಂಬ ಕೂಗು ಕೇಳಿ ಬರುತ್ತಿದೆ. ಪ್ರತಿಭಟನೆಯಲ್ಲಿ ಜಾತಿ,ಮತ,ಪಂಥ ಭೇಧವಿಲ್ಲದೇ ಎಲ್ಲರೂ ಪಾಲ್ಗೊಂಡು ಈ ಜಾಥಾಕ್ಕೆ ಕೈ ಜೋಡಿಸಿದ್ದಾರೆ.ಈ ಸಂದರ್ಭದಲ್ಲಿ ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಅಲ್ಲಲ್ಲಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿದೆ.ಜತೆಗೆ ಸುಳ್ಯ ನಗರದಲ್ಲಿ ಪ್ರತಿಭಟನಾ ಸಭೆ ನಡೆಯಲಿರುವುದರಿಂದ ಅಲ್ಲಿ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿದ್ದಾರೆ.
ಈ ಹಿಂದೆ ಸುಳ್ಯದ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ನ್ಯಾಯಕ್ಕಾಗಿ ಸೌಜನ್ಯ ಹೋರಾಟ ಸಮಿತಿಯ ವಸಂತ್, ಸೌಜನ್ಯಳ ಹತ್ಯೆ ನಡೆದು ೧೧ ವರ್ಷವಾಗಿದೆ. ನಿರಪರಾಧಿಯನ್ನು ಅಪರಾಧಿ ಮಾಡಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯದ ಕಣ್ಣಿಗೆ ಮಣ್ಣೆರಚುವ ಕೆಲಸ ಆಗಿದೆ. ಈ ಕೂಡಲೇ ಸೌಜನ್ಯ ಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಬೇಕಿದೆ ಎಂದು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಇಂದು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು , ಇನ್ನೇನು ಕೆಲವೇ ಕ್ಷಣಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸುಳ್ಯ ನಗರದಲ್ಲಿ ಪೊಲೀಸ್ ಕಣ್ಗಾವಲಿದ್ದು, ಹದ್ದಿನ ಕಣ್ಣು ಇರಿಸಿದ್ದಾರೆ. ಇದಕ್ಕಾಗಿ ಅಡಿಷನಲ್ ಎಸ್ಪಿ ಧರ್ಮಪ್ಪರವರು ಸುಳ್ಯದಲ್ಲಿದ್ದು ಸಂಪೂರ್ಣ ನಿಗಾ ವಹಿಸಿದ್ದಾರೆ.ಎರಡು ಕೆಎಸ್ಆರ್ಪಿ ತುಕಡಿ ಸಿಬ್ಬಂದಿ ಸೇರಿದಂತೆ ಹತ್ತಾರು ಪೊಲೀಸರು ಹಾಗೂ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಇದ್ದಾರೆ.ಜತೆಗೆ ಪುತ್ತೂರು ವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಚರಿಸುತ್ತಿದೆ.