21.6 C
Sullia
Sunday, March 8, 2026

ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭ್ರಮದ ಆಯುಧ ಪೂಜೆ

ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಹ ಸಂಸ್ಥೆಗಳಾದ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ನರ್ಸಿಂಗ್ ಸೈನ್ಸಸ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಸೇರಿದಂತೆ ಎಲ್ಲಾ ಸಹ ಸಂಸ್ಥೆಗಳ ಸಹಯೋಗದೊಂದಿಗೆ ಆಯುಧ ಪೂಜೆಯನ್ನು ಅ. 1 ರಂದು ಹಮ್ಮಿಕೊಳ್ಳಲಾಯಿತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅರ್ಚಕರಾದ ಶ್ರೀ ನಾರಾಯಣ್ ಭಟ್ ಅವರ ನೇತೃತ್ವದಲ್ಲಿ ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಅಧ್ಯಕ್ಷರಾದ ಡಾ ಕೆವಿ ಚಿದಾನಂದ ಅವರ ಮುಖ್ಯ ಉಪಸ್ಥಿತಿಯೊಂದಿಗೆ ಪೂಜಾ ವಿಧಿ ವಿಧಾನಗಳು ನೆರವೇರಿದವು.

ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಉಪಾಧ್ಯಕ್ಷರು ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕಾರ್ಯದರ್ಶಿ ಡಾ ಐಶ್ವರ್ಯ ಕೆ.ಸಿ ಕಾಲೇಜಿನ ಡೀನ್ ಡಾ ನೀಲಾಂಬಿಕೈ ನಟರಾಜನ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರು ಪ್ರೊ.ಡಾ ಲೀಲಾಧರ್ ಡಿ. ವಿ, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರು ಪ್ರೊ. ಡಾ ರುದ್ರಕುಮಾರ್ ಎಂ. ಎಂ. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ(ರಿ.) ಅಧ್ಯಕ್ಷರಾದ ಡಾ ಎನ್. ಎ ಜ್ಞಾನೇಶ್, ಡಾ ಪ್ರಮೋದ್ ಕೆ ಜೆ, ಚಂದ್ರಾವತಿ ಕೆ. ಎಸ್, ಡಾ ಮನೀಶ್ ಉಪಸ್ಥಿತರಿದ್ದರು.

ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಬಳಕೆಯಲ್ಲಿರುವ ವೈದ್ಯಕೀಯ ಉಪಕರಣಗಳು, ವಾಹನಗಳು ಮತ್ತು ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು,ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Latest Articles