21.6 C
Sullia
Sunday, March 8, 2026

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!

ನ್ಯೂಸ್ ನಾಟೌಟ್ : ಟಿವಿ ನೋಡುವುದು ಕಡಿಮೆ ಮಾಡು ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೃತಳನ್ನು ಏಳನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಎಂದು ಗುರುತಿಸಲಾಗಿದೆ. ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಊಟ ಮಾಡುತ್ತಿದ್ದ ಸುಪ್ರಿತಾ, ಟಿವಿ ನೋಡುತ್ತಾ ತಟ್ಟೆ ಬೀಳಿಸಿ ಅನ್ನವನ್ನು ಚೆಲ್ಲಿದ್ದಾಳೆ.

ಅದಕ್ಕೆ ತಾಯಿ ಟಿವಿ ನೋಡುವುದು ಕಡಿಮೆ ಮಾಡು, ಚೆಲ್ಲಿರುವ ಅನ್ನವನ್ನು ಕ್ಲೀನ್ ಮಾಡು ಎಂದು ಹೇಳಿ ಮತ್ತೆ ಕೆಲಸಕ್ಕೆ ಹೋಗಿದ್ದರು. ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Related Articles

LEAVE A REPLY

Please enter your comment!
Please enter your name here

Latest Articles