ಬೆಂಗಳೂರು: ಕರ್ನಾಟಕ ಸೇರಿದಂತೆ ಇತರೆ 5 ರಾಜ್ಯಗಳ 14 ಸ್ಥಳಗಳಲ್ಲಿ ಏಕಕಾಲಕ್ಕೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆ ಹಾಗೂ ಇನ್ನಿತರ ಅಕ್ರಮ ಚಟುವಟಿಕೆ ಭಾಗಿಯಾಗಿರುವ ಶಂಕೆಯಲ್ಲಿ ಎನ್ಐಎ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಭಾರತದಲ್ಲಿ 2047ರೊಳಗೆ ಪಿಎಫ್ ಐ ಆರ್ಮಿ ಸ್ಥಾಪಿಸಲು ಮುಂದಾಗಿರುವ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ದಕ್ಷಿಣ ಕನ್ನಡ , ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಹಾಗೂ ಇತರ ರಾಜ್ಯಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ಮಾಡಲಾಗಿದೆ.
ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್ , ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನಲೆ ಕೆಲ ಪಿಎಫ್ಐ ಏಜೆಂಟ್ಗಳನ್ನ ಎನ್ಐಎ ಬಂಧಿಸಿತ್ತು. ಅಲ್ಲದೇ ಈ ಹಿಂದೆ ಪಿಎಫ್ಐನ 19 ಜನರ ವಿರುದ್ಧ ಚಾರ್ಚ್ ಶೀಟ್ ಸಲ್ಲಿಕೆ ಮಾಡಿತ್ತು. ಇವರ ತನಿಖೆ ವೇಳೆ ಯುವಕರಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡಿ ಶಸ್ತ್ರಾಸ್ತ್ರ ತರಬೇತಿ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.