27.7 C
Sullia
Sunday, March 8, 2026

ಕಾಂಗ್ರೆಸ್ ವಿರುದ್ಧ ಖಾಲಿ ಟ್ರಂಕ್ ಹಿಡಿದಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಸಂಕಷ್ಟ..!, 10 ಮಂದಿಗೆ ನೋಟಿಸ್

ನ್ಯೂಸ್ ನಾಟೌಟ್: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಾಯಿಸ್ತಿದೆ ಅಂತಾ ಆರೋಪಿಸಿ ಖಾಲಿ ಟ್ರಂಕ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಇದೀಗ ಪೊಲೀಸರಿಂದ ಖಾಸಗಿ ದೂರು ದಾಖಲಾಗಿದೆ. ಈ ಸಂಬಂಧ ತೇಜಸ್ವಿ ಸೂರ್ಯ ಸೇರಿ ಒಂಭತ್ತು ಜನರಿಗೆ 42ನೇ ಎಸಿಜೆಎಂ ಕೋರ್ಟ್​ನಿಂದ ನೋಟಿಸ್ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಇತ್ತೀಚೆಗೆ ತೀವ್ರ ಜಟಾಪಟಿ ನಡೆದಿತ್ತು. ಕೊನೆಗೆ ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮೆಟ್ರೋ ರೈಲು ಪ್ರಯಾಣ ದರ ಏರಿಕೆ ವಿರುದ್ಧ ಖಾಲಿ ಟ್ರಂಕ್ ಹಿಡಿದು ಪ್ರತಿಭಟಿಸಿದ್ದಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಜಯನಗರ ಠಾಣೆ ಇನ್ಸ್​ಪೆಕ್ಟರ್ ಆರ್.ದೀಪಕ್​ರಿಂದ ಖಾಸಗಿ ದೂರು ನೀಡಲಾಗಿದೆ. ಖಾಸಗಿ ದೂರು ಸಂಬಂಧ ಸಂಸದ ತೇಜಸ್ವಿ ಸೂರ್ಯ, ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಸೇರಿ 9 ಜನರಿಗೆ 42ನೇ ಎಸಿಜೆಎಂ ಕೋರ್ಟ್​ನಿಂದ ನೋಟಿಸ್ ನೀಡಲಾಗಿದೆ.

ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಾಯಿಸಿದೆ ಅಂತಾ ಆರೋಪಿಸಿರುವ ಸಂಸದ ತೇಜಸ್ವಿ ಸೂರ್ಯ, ಇತ್ತೀಚೆಗೆ ವಿಭಿನ್ನವಾಗಿ ಪ್ರತಿಭಟನೆಗೆ ಮುಂದಾಗಿದ್ದರು. ಬೆಂಗಳೂರಿನ ಆರ್‌.ವಿ ರೋಡ್ ಮೆಟ್ರೋ ಸ್ಟೇಷನ್ ಬಳಿ ಖಾಲಿ ಟ್ರಂಕ್ ಪ್ರದರ್ಶಿಸಿದ್ದರು. ರಾಜ್ಯ ಸರ್ಕಾರದಲ್ಲಿ ಖಜಾನೆ ಖಾಲಿಯಾಗಿದೆ. ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರವೇ ದರ ಏರಿಕೆ ಸಮಿತಿಗೆ ಒತ್ತಾಯಿಸಿದೆ ಅಂತಾ ಕಿಡಿಕಾರಿದ್ದರು.

ಇನ್ನೂ ಪ್ರತಿಭಟನೆ ಮಾಡದಂತೆ ತೇಜಸ್ವಿ ಸೂರ್ಯಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್ ಗೆ ಕಿಡಿಕಾರಿದ್ದ ಸಂಸದ, ನಾನು ಪ್ರತಿಭಟನೆ ಮಾಡಿಲ್ಲ. ಖಾಲಿ ಟ್ರಂಕ್ ಹಿಡಿದುಕೊಂಡು ಮೆಟ್ರೋದಲ್ಲಿ ಹೋಗುತ್ತಿದ್ದೆ. ನನಗೆ ನೋಟಿಸ್ ಕೊಡುತ್ತೀರಾ ಅಂತಾ ಗುಡುಗಿದ್ದರು. ಬಳಿಕ ತೇಜಸ್ವಿ ಸೂರ್ಯರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.

Related Articles

LEAVE A REPLY

Please enter your comment!
Please enter your name here

Latest Articles