ನ್ಯೂಸ್ ನಾಟೌಟ್: ಶಿಷ್ಟಾಚಾರ ಉಲ್ಲಂಘನೆ ವಿಚಾರದಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಿದ್ದನ್ನು ವಿರೊಧಿಸಿ ಇಂದು ಧರಣಿ ನಡೆಸಿದರು ಮತ್ತು ಈ ಹಿಂದೆ ಆ ಬಗ್ಗೆ ಕ್ರಮಕೈಗೊಳ್ಳಲು ಆಗ್ರಹಿಸಿದ್ದರು. ಈ ಕುರಿತು ಬಿಜೆಪಿ ಶಾಸಕರು ಬಿಜೆಪಿ ಶಾಸಕರ ಹಕ್ಕುಚ್ಯುತಿ ಉಲ್ಲಂಘನೆ ಆರೋಪಿಸಿ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರು ಧರಣಿ ನಡೆಸಿದ್ದಾರೆ.
ದ.ಕ ಜಿಲ್ಲಾಧಿಕಾರಿ ಹಾಗೂ ಉಸ್ತುವಾರಿ ಸಚಿವರ ಕಚೇರಿ ಎದುರು ಬಿಜೆಪಿ ಶಾಸಕರು(BJP MLAs), ಸಂಸದ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧರಣಿ ನಡೆಸಿದ್ದಾರೆ. ಡಿಸಿ ಕಚೇರಿ ಪ್ರವೇಶ ದ್ವಾರದಲ್ಲೇ ಕುಳಿತ ಶಾಸಕರು, ನಳಿನ್ ಕುಮಾರ್ ಕಟೀಲ್ ಜಿಲ್ಲಾಡಳಿತ ಹಾಗೂ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರದ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ ಭಾಗಿಯಾಗಿದ್ದರು. ಮೂಡಬಿದ್ರೆ ಮತ್ತು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಶಾಸಕರ ಹಕ್ಕುಚ್ಯುತಿ ಆಗಿದೆ ಅಂತ ಆರೋಪಿಸಿ ಧರಣಿ ನಡೆಸಲಾಗಿದೆ.
ಸರ್ಕಾರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆ ಹೆಸರಲ್ಲಿ ಶಾಸಕರಿಗೆ ಮಾಹಿತಿ ನೀಡದೇ ಕಾರ್ಯಕ್ರಮ ರದ್ದು ಮಾಡಲಾಗಿದೆ. ದ.ಕ ಜಿಲ್ಲಾಡಳಿತದಿಂದ ಕಾರ್ಯಕ್ರಮಗಳ ರದ್ದು ಮಾಡಿ ಶಾಸಕರಿಗೆ ಅವಮಾನ ಆರೋಪಿಸಿ ಧರಣಿ ಕುಳಿತಿದ್ದರು. ಮೂಡಬಿದಿರೆಯ ಇರುವೈಲ್ ಪಂಚಾಯ್ ಕಟ್ಟದ ಉದ್ಘಾಟನೆ ವಿಚಾರದಲ್ಲಿ ಆಮಂತ್ರಣ ಪತ್ರಿಕೆಯಲ್ಲಿ ಪ್ರಿಯಾಂಕ್ ಖರ್ಗೆ(Priyank kharge) ಹೆಸರಿಲ್ಲ ಅಂತ ಕಾರ್ಯಕ್ರಮ ರದ್ದು ಮಾಡಲಾಗಿತ್ತು. ಶಿಷ್ಟಾಚಾರ ಉಲ್ಲಂಘನೆ ಹೆಸರಲ್ಲಿ ಪಿಡಿಓ ಹಾಗೂ ತಾ.ಪಂ ಇಓ ಸಸ್ಟೆಂಡ್ ಮಾಡಲಾಗಿತ್ತು.
ಬಂಟ್ವಾಳದಲ್ಲೂ ಸರ್ಕಾರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿವಾದದಲ್ಲಿ ಆಮಂತ್ರಣದಲ್ಲಿ ಕಾಂಗ್ರೆಸ್ ಎಂಎಲ್ ಸಿಗಳ ಹೆಸರು ಮೇಲೆಕೆಳಗಾಗಿದೆ ಅಂತ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಕಾರ್ಯಕ್ರಮವೂ ರದ್ದಾಗಿತ್ತು.
ಬಂಟ್ವಾಳ ಮತ್ತು ಮೂಡಬಿದಿರೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರಿಗೆ ಅವಮಾನ ಆರೋಪಿಸಿ ಅಮಾನತು ಆದೇಶ ಹಿಂಪಡೆಯಲು ಹಾಗೂ ಶಾಸಕರ ಹಕ್ಕಿನ ರಕ್ಷಣೆಗೆ ಒತ್ತಾಯಿಸಿ ಧರಣಿ ನಡೆಸಲಾಗಿದೆ.
ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಕ್ಕುಚ್ಯುತಿ ಆಗಿದೆ. ಜೊತೆಗೆ ಸ್ಥಳೀಯ ಕಾಂಗ್ರೆಸ್ ಮಾಜಿ ಶಾಸಕರು, ಮಾಜಿ ಸಚಿವರು ಹಾಗೂ ಕೈ ನಾಯಕರಿಂದ ಆಡಳಿತದಲ್ಲಿ ಹಸ್ತಕ್ಷೇಪ ಆರೋಪಿಸಿ ಧರಣಿ ನಡೆದಿದ್ದು, ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಧ್ಯ ಪ್ರವೇಶಿಸಿ ಭರವಸೆ ನೀಡಿದ ಬಳಿಕ ಧರಣಿ ಅಂತ್ಯವಾಗಿದೆ ಎಂದು ವರದಿ ತಿಳಿಸಿದೆ.