21.6 C
Sullia
Sunday, March 8, 2026

ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​? ಸಿಎಂ ಹೇಳಿದ್ದೇನು?

ನ್ಯೂಸ್ ನಾಟೌಟ್ : ಶೀಘ್ರದಲ್ಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್​ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿವಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸುಳಿವು ನೀಡಿದ್ದಾರೆ. ಮೊಬೈಲ್ ಬ್ಯಾನ್​ ವಿಚಾರವಾಗಿ ಮುಖ್ಯಮಂತ್ರಿಗಳು ವಿಸಿಗಳಿಂದಲೂ ಅಭಿಪ್ರಾಯ ಕೇಳಿದ್ದು, ಪ್ರಸ್ತಾಪಕ್ಕೆ ವಿಶ್ವವಿದ್ಯಾಲಯದ ಕುಲಪತಿಗಳಿಂದಲೂ ಒಪ್ಪಿಗೆ ಸಿಕ್ಕಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್​ ಬಳಕೆಗೆ ಕಡಿವಾಣ ಹಾಕಬೇಕಿದ್ದು, ಆಸ್ಟ್ರೇಲಿಯಾ ಸೇರಿ ಅನೇಕ ದೇಶಗಳಲ್ಲಿ ಈ ನಿಯಮ ಮಾಡಿದ್ದಾರೆ. ಸೋಷಿಯಲ್​ ಮೀಡಿಯಾಗಳಿಂದ ವಿದ್ಯಾರ್ಥಿಗಳು ಹಾಳಾಗುತ್ತಿರುವ ಆರೋಪ ಹಿನ್ನೆಲೆ ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧಕ್ಕೆ ಚಿಂತನೆ ಇದೆ ಎನ್ನಲಾಗಿದೆ.

ಡ್ರಗ್ಸ್​​ ಒಂದು ಪಿಡುಗಾಗಿದ್ದು, ವಿಶ್ವ ವಿದ್ಯಾಲಯಗಳ ಕಾಂಪಸ್​​ಗಳು ಮಾದಕ ವಸ್ತುಗಳಿಂದ ಮುಕ್ತವಾಗಿರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಇದೇ ವೇಳೆ ವಿಸಿಗಳಿಗೆ ಸೂಚಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles