ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಗೋಕಳ್ಳರ ಅಟ್ಟಹಾಸ ಮಿತಿ ಮೀರಿದೆ. ಆ. 14ರಂದು ರಾತ್ರಿ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗ ಗ್ರಾಮದ ದಡ್ಡಿ ಎಂಬಲ್ಲಿ ರಾತ್ರಿ ಅಂಗಡಿ ಮುಂಭಾಗದಲ್ಲಿ ಮಲಗಿದ್ದ ಬೀಡಾಡಿ ದನವನ್ನು ಗೋಕಳ್ಳರು ಹಿಂಸಾತ್ಮಕವಾಗಿ ಕತ್ತು ಹಿಸುಕಿ ಟ್ರ್ಯಾಪ್ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆ. 14ರಂದು ರಾತ್ರಿ ಮೂರು ದನಗಳನ್ನು ಕಳವು ಮಾಡಿದ ಬಗ್ಗೆ ಬಜಪೆ ಠಾಣೆಯಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯಂತೆ ದೂರು ದಾಖಲಾಗಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಖತರ್ನಾಕ್ ಗೋಕಳ್ಳರನ್ನು ಶನಿವಾರ (ಆ. 19) ಬಂಧಿಸಿದ್ದಾರೆ.
ಬಂಧಿತರನ್ನು ಉಳ್ಳಾಲ ತಾಲೂಕಿನ ಇರ್ಫಾನ್ (30) ಮತ್ತು ಬಂಟ್ವಾಳ ತಾಲೂಕಿನ ಮೊಹಮ್ಮದ್ ಆರಿಫ್ (32) ಎಂದು ಗುರುತಿಸಲಾಗಿದೆ. ಅಲ್ಲದೇ ಕೃತ್ಯಕ್ಕೆ ಬಳಸಿದ 5 ಲಕ್ಷ ರೂ. ಮೌಲ್ಯದ ಮಾರುತಿ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.