ಕರಾವಳಿಸುಳ್ಯ

ಸುಳ್ಯ : ಡಿ. ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ

ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜನ್ಮ ದಿನಾಚರಣೆ ಭಾನುವಾರ (ಆ.20) ಕೇರ್ಪಳ ಬಂಟರ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಎಂ.ಮಂಜುನಾಥ ಉದ್ಘಾಟಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಅವರು ದೇವರಾಜ ಅರಸು ಕುರಿತು ಉಪನ್ಯಾಸ ನೀಡಿ ಉಳುವವನೇ ಹೊಲದೊಡೆಯ ಸೇರಿದಂತೆ ಕ್ರಾಂತಿಕಾರಿ ಬದಲಾವಣೆಗಳನ್ನು ಮಾಡಿ ಸಮಾಜ ಸುಧಾರಕರಾಗಿ, ಪರಿವರ್ತನೆಯ ಹರಿಕಾರರಾಗಿದ್ದವರು ಡಿ.ದೇವರಾಜ ಅರಸು ಅವರು. ಆದ್ದರಿಂದಲೇ ಇಷ್ಟು ಮಂದಿ ಮಾಜಿ ಮುಖ್ಯಮಂತ್ರಿಗಳ ಪೈಕಿ ದೇವರಾಜ ಅರಸು ಅವರನ್ನು ಇಡೀ ರಾಜ್ಯ ಸದಾ ನೆನಪಿಸಿ ಗೌರವಿಸಲಾಗುತ್ತಿದೆ ಎಂದರು.

ಸಮಾರಂಭದಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕೆಯಲ್ಲಿ ಶೇ.100 ಫಲಿತಾಂಶ ಬಂದ ವಿದ್ಯಾರ್ಥಿ ನಿಲಯಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಸುಳ್ಯ ತಾಲೂಕಿನ ವಿದ್ಯಾರ್ಥಿನಿಲಯಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸುವ ಅಡುಗೆ ಸಿಬ್ಬಂದಿಯನ್ನು ಗೌರವಿಸಲಾಯಿತು.

ನಗರ ಪಂಚಾಯತ್ ಸದಸ್ಯರಾದ ಡೇವಿಡ್ ಧೀರಾ‌ ಕ್ರಾಸ್ತಾ, ಸುಧಾಕರ‌ ಕುರುಂಜಿಗುಡ್ಡೆ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಎಚ್, ಉಬರಡ್ಮ ಮಿತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಚಿತ್ರಾ ಕುಮಾರಿ, ಕ್ಷೇತ್ರ ಶಿಕ್ಷಣ ಸಂಯೋಜಕಿ ನಳಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಾ ಸ್ವಾಗತಿಸಿ, ಮೇಲ್ವಿಚಾರಕಿ ಗೀತಾ ವಂದಿಸಿದರು. ದೀಪಿಕಾ ಮತ್ತು ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

Shirur landslide| ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..! ಲಾರಿಯ ಅವಶೇಷಗಳ ಜೊತೆಗೆ ದೊರೆತ 2 ಮೃತದೇಹಗಳು..!

ಸುಳ್ಯ: ಸೆ.30ರವರೆಗೆ ಕೆವಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಶಿಬಿರ

ಸುಳ್ಯ: ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ