ನ್ಯೂಸ್ ನಾಟೌಟ್: ಚಿಕಿತ್ಸೆಗೆಂದು ಬಂದ ಕೈದಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು
ಬಂಟ್ವಾಳದ ಸಜೀವನಡು ನಿವಾಸಿ ಎಸ್.ಎಮ್ ನೌಫಾಲ್(32) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎನ್ಡಿಪಿಎಸ್ ಪುಕರಣಕ್ಕೆ ಸಂಬಂಧಿಸಿದಂತೆ ಎಸ್.ಎಂ ನೌಫಾಲ್ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದನು. ಈತನ ವಿರುದ್ಧ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇತ್ತೀಚೆಗೆ ಈತ ಅನಾರೋಗ್ಯವಾಗಿದೆ ಎಂದು ಹೇಳಿಕೊಂಡಿದ್ದ.
ಇದರಿಂದ ಪೊಲೀಸರು ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಆತ ಚಿಕಿತ್ಸೆ ನೀಡುತ್ತಿದ್ದ ಸಮಯದಲ್ಲಿಯೇ ಸರಿಯಾದ ಸಮಯ ನೋಡಿಕೊಂಡು ಅಲ್ಲಿಂದ ಪರಾರಿಯಾಗಿದ್ದ. ಆಗಸ್ಟ್ 16ರಂದು 5.06ಕ್ಕೆ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸ್ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು ಎಂದು ತಿಳಿದು ಬಂದಿದೆ
ಈ ಬಗ್ಗೆ ಆರೋಪಿಯ ಕರ್ತವ್ಯದಲ್ಲಿದ್ದ ಪೊಲೀಸ್ ಸಚಿನ್ ಕೆ.ಎಸ್ ನೀಡಿದ ದೂರಿನಂತೆ ಮಂಗಳೂರು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಸ್ಟ್ 19ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಪಿ.ಎಸ್.ಐ ಮನೋಹರ್ ಪ್ರಸಾದ್ ಹಾಗೂ ಸಿಬ್ಬಂದಿ ಆರೋಪಿಯನ್ನು ಹಿಡಿದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.