21.6 C
Sullia
Sunday, March 8, 2026

ವಿಶ್ವ ದಾಖಲೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರದ ಶಕ್ತಿ ಯೋಜನೆ: ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ

ನ್ಯೂಸ್ ನಾಟೌಟ್ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ ಲಭಿಸಿದೆ. 500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಮಹಿಳಾ ಪ್ರಯಾಣಿಕರು ಸೇರಿದಂತೆ ನಾಲ್ಕು ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಧನ್ಯವಾದ ತಿಳಿಸಿದ್ದಾರೆ.

ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ ಬಗ್ಗೆ ಕೆಎಸ್​​​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ 2023 ಜೂನ್ 11 ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ನಾಲ್ಕು ಸಾರಿಗೆ ಸಂಸ್ಥೆಯಲ್ಲಿ ಉಚಿತವಾಗಿ ಮಹಿಳೆಯರು 500 ಕೋಟಿಗೂ ಹೆಚ್ಚು ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles