ನ್ಯೂಸ್ ನಾಟೌಟ್ : ಗ್ರಾಮದ ಅಭಿವೃದ್ಧಿಯಲ್ಲಿ ಪಾಲ್ಗೊಂಡು ಸದಾ ಜನರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಕರಿಕೆ ಗ್ರಾಮವು ಇನ್ನೂ ಹಲವಾರು ಸಮಸ್ಯೆಗಳಿಂದ ಹೊರಬರಬೇಕಿದೆ. ಇದಕ್ಕೆ ಎಲ್ಲಾ ಸದಸ್ಯರು ಮತ್ತು ಗ್ರಾಮಸ್ಥರ ಸಹಕಾರ ಅಗತ್ಯ ಎಂದು ಕರಿಕೆ ಗ್ರಾಮ ಪಂಚಾಯತ್ನ ನೂತನ ಅಧ್ಯಕ್ಷ ಎನ್. ಬಾಲಚಂದ್ರನ್ ನಾಯರ್ ಹೇಳಿದರು.
ಕರಿಕೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಆ.21) ಗ್ರಾಪಂನ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಎನ್ . ಬಾಲಚಂದ್ರನ್ ನಾಯರ್ ಮತ್ತು ಉಪಾಧ್ಯಕ್ಷೆಯಾಗಿ ಕೆ. ಕಲ್ಪನಾ ಜಗದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದು, ಅವರ ಪದಗ್ರಹಣ ಕಾರ್ಯಕ್ರಮ ಸೋಮವಾರ ನೆರವೇರಿತು.
ಕಾರ್ಯಕ್ರಮದಲ್ಲಿ ಕರಿಕೆ ಗ್ರಾಮ ಪಂಚಾಯತ್ ಪಿ.ಡಿ.ಒ ಗಣಪತಿ, ಉಪಾಧ್ಯಕ್ಷೆ ಕೆ.ಕಲ್ಪನಾ ಜಗದೀಶ್ , ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಆಯಿಷಾ, ಜಯಶ್ರೀ ಕೆ.ಜೆ, ಸುಗಂಧಿ, ಕಟ್ಟಕೋಡಿ ದೇವದತ್ತ, ದೀಪಿಕಾ ಪಿ.ಆರ್ , ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಇಲಾಖೆ ಅಧಿಕಾರಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.