ನ್ಯೂಸ್ ನಾಟೌಟ್ :15 ವರ್ಷದ ಬಾಲಕನೋರ್ವ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು,ಬೆಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉಪ್ಪಿನಂಗಡಿಯ ಪೆದಮಲೆಯ ಸಮದ್ ಹಾಜಿ ಹಾಗೂ ರೇಷ್ಮಾ ದಂಪತಿಯ ಪುತ್ರ ಅಹ್ಮದ್ ಸಅದ್(15) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಇಂಡಿಯನ್ ಸ್ಕೂಲ್ ವಿದ್ಯಾರ್ಥಿಯಾಗಿದ್ದ ಈತ 10ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ಪಠ್ಯ- ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದು, ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಎನ್ನಲಾಗಿದೆ.
ಅನಾರೋಗ್ಯ ಕಾರಣದಿಂದಾಗಿ ಈತನನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.ಮೃತನ ಸ್ಮರಣಾರ್ಥ ಆ.22ರಂದು ಇಂಡಿಯನ್ ಸ್ಕೂಲ್ ಗೆ ರಜೆ ಸಾರಲಾಗಿದೆ ಎಂದು ತಿಳಿದು ಬಂದಿದೆ.