ನ್ಯೂಸ್ ನಾಟೌಟ್: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಚೂರಿಯಿಂದ ಯುವತಿಯ ಕತ್ತು ಸೀಳಿರುವ ಘಟನೆ ನಡೆದಿದ್ದು, ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿ ಪದ್ಮರಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿ ಚೂರಿಯಿಂದ ಯುವತಿಯ ಕತ್ತು ಸೀಳಿ ಪರಾರಿಯಾಗಿದ್ದ ಘಟನೆ ಪುತ್ತೂರಿನಲ್ಲಿ ನಡೆದಿತ್ತು.ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ದುರ್ಘಟನೆ ಸಂಭವಿಸಿತ್ತು. ಮೂರರಿಂದ ನಾಲ್ಕು ಬಾರಿ ಯುವತಿಯ ಕತ್ತಿಗೆ ಇರಿದು ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತಿದ್ದ ಎನ್ನಲಾಗಿದೆ.ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಗೌರಿ(18) ಗಂಭೀರಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಏಕಾಏಕಿ ಬೈಕ್ ನಲ್ಲಿ ಬಂದು ಯುವತಿಯ ತಡೆದು ಚೂರಿ ಇರಿದಿದ್ದು,ಕೂಡಲೇ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಯುವತಿ ಪುತ್ತೂರಿನ ವಸ್ತ್ರ ಮಳಿಗೆಯೊಂದರಲ್ಲಿ ಕೆಲಸಕ್ಕಿದ್ದರು ಎಂದು ತಿಳಿದು ಬಂದಿದೆ. ಗೌರಿ ಮತ್ತು ಪದ್ಮರಾಜ್ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಪದ್ಮರಾಜ್ ಮತ್ತು ಗೌರಿ ಇಬ್ಬರೂ ಹಲವು ಬಾರಿ ಗಲಾಟೆ ಮಾಡಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು,ಈ ಸಂಬಂಧ ಪ್ರಕರಣವು ವಿಟ್ಲ ಪೋಲೀಸ್ ಠಾಣೆ ಮೆಟ್ಟ ಲೇರಿತ್ತು.
ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಚೂರಿ ಇರಿತಗೊಂಡ ಯುವತಿ ಗಂಭೀರ ಗಾಯಗೊಂಡ ಹಿನ್ನೆಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಕೆರದೊಯ್ಯಲಾಗಿತ್ತು. ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಕೊನೆಗೆ ಆಕೆ ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ಯುವಕ ಆಕೆಯ ಕತ್ತಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕುದ್ದು ಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂದು ಗುರುತಿಸಲಾಗಿದೆ.
ಚೂರಿ ಪ್ರಕರಣದ ಆರೋಪಿಯನ್ನು ಪುತ್ತೂರು ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಸರಪಾಡಿಯ ಪದ್ಮರಾಜ್ ಎಂದು ಗುರುತಿಸಲಾಗಿದೆ. ಬೈಕ್ ನಂಬರ್ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಕೃತ್ಯಕ್ಕೆ ಬಳಸಿದ ಚೂರಿ ಮತ್ತು ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.