ನ್ಯೂಸ್ ನಾಟೌಟ್: ಅಕ್ರಮವಾಗಿ ಮರಳು ದಾಸ್ತಾನಿಟ್ಟ ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ದಾಳಿ ನಡೆಸಿ ಮರಳು ವಶಕ್ಕೆ ಪಡೆದ ಘಟನೆ ಗುರುವಾರ ನಡೆದಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮನ್ನೂರು ಗ್ರಾಮದ ಕಲ್ಲಾಪು ಮತ್ತು ಉಳ್ಳಾಲದ ಕೋಟೆ ಪುರದಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರಳು ಅಡ್ಡೆಗೆ ಉಳ್ಳಾಲ ಠಾಣಾ ಪೊಲೀಸರು ಖಚಿತ ಮಾಹಿತಿ ಮೇರೆಗೆ ಗುರುವಾರ ಬೆಳಗ್ಗಿನ ಜಾವಾ ದಾಳಿ ನಡೆಸಿದ್ದಾರೆ. ಈ ಸಂದರ್ಭ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಕೆಎಲ್ 29- 482 ಪಿಕಪ್ ವಾಹನ ಮತ್ತು ಅಂದಾಜು 12 ಲೋಡು ಸಾಮಾನ್ಯ ಮರಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಶಪಡಿಸಿಕೊಂಡ ಮರಳು ಮತ್ತು ವಾಹನವನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ.